ಕಾಡಾನೆ ಸಾವು ಪ್ರಕರಣದಲ್ಲಿ ಕಾರ್ಮಿಕನ ಬಂಧನ: ರೈತ ಸಂಘದಿಂದ ಪ್ರತಿಭಟನೆನೆಲ್ಯಹುದಿಕೇರಿಯ ಅತ್ತಿಮಂಗಲ ಸಮೀಪದ ಮೇರಿಲ್ಯಾಂಡ್ ಕಾಫಿ ತೋಟದಲ್ಲಿ ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕ ಜೋಸೆಫ್ ಎಂಬವರನ್ನು ಬಂಧಿಸಿ ಮಾರಣಾಂತಿಕ ಹಲ್ಲೆ ನಡೆಸಿ ಸುಳ್ಳು ಮೊಕದಮ್ಮೆ ಹಾಕಿರುವ ಅರಣ್ಯ ಇಲಾಖೆಯ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ ಹಾಗೂ ಕಾರ್ಮಿಕ ಸಂಘಟನೆಗಳು ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.