ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವಕ್ಫ್ ತಿದ್ದುಪಡಿ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.