ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಶ್ರಮಿಸಿ: ಡಾ.ಮಂತರ್ ಗೌಡಅರೆಕಾಡು ರಿಯಾವರ್ ರೆಸಾರ್ಟ್ಸ್‌ನಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವಿನೂತನ ಕಾರ್ಯಕ್ರಮ ‘ನಾಡೊರ್ಮೆ’ ಕಾರ್ಯಕ್ರಮ ನಡೆಯಿತು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ಮಾತನಾಡಿ, ವಿಭಿನ್ನ, ವಿಶಿಷ್ಟ ಸಂಸ್ಕೃತಿಯುಳ್ಳ ಜನಾಂಗ ಕೊಡವರದ್ದಾಗಿದ್ದು, ಈ ಸಂಸ್ಕೃತಿ ಹಾಗೂ ಭಾಷೆ ಉಳಿಸಿಕೊಂಡು ಹೋಗುವ ಹಾಗೂ ಮುಂದಿನ ಪೀಳಿಗೆಯಲ್ಲಿ ಅಭಿಮಾನ ಹುಟ್ಟಿಸುವ ಕೆಲಸ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಆಗಬೇಕಿದೆ ಎಂದರು.