ಮಡಿಕೇರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹಸಹಕಾರ ಸಂಘಗಳು ಆರ್ಥಿಕ ಪ್ರಗತಿ ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ ನಂತರ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.