ಹಸಿರು ದೀಪಾವಳಿ ಜಾಗೃತಿಗೆ ಶಿಕ್ಷಕರ ಕೊಡುಗೆ ಅಗತ್ಯ: ರಂಗಧಾಮಪ್ಪಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ಇಕೋ ಕ್ಲಬ್, ಎನ್.ಎಸ್.ಎಸ್. ಸಹಯೋಗದೊಂದಿಗೆ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ ಅಭಿಯಾನ: 2024’ ರಡಿ ‘ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2024 ರತ್ತ ನಮ್ಮ ಹೆಜ್ಜೆ’ ಪರಿಸರ ಜಾಗೃತಿ ಅಭಿಯಾನ ನಡೆಯಿತು. ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿ ಕರಪತ್ರ ಬಿಡುಗಡೆಗೊಂಡಿತು.