ಪರಿಸರ ಸ್ನೇಹಿ ದಸರಾ ಆಚರಣೆಗೆ ಕೈಜೋಡಿಸಿ: ಡಿಸಿ ಕರೆಮಡಿಕೇರಿ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಶುಕ್ರವಾರದಿಂದ ಅ.12ರ ವರೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ವತಿಯಿಂದ ವಿವಿಧ ದಸರಾ ಕಾರ್ಯಕ್ರಮಗಳು ಜರುಗಲಿವೆ ಎಂದರು.