ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಒತ್ತು: ನಾಗೇಂದ್ರ ಪ್ರಸಾದ್ ಸಲಹೆಜಿಲ್ಲೆಯಲ್ಲಿ ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕೆಂದು ಕೊಡಗು ಜಿಲ್ಲಾ ಹೊಟೇಲ್, ರೆಸಾರ್ಟ್ ಹಾಗೂ ಉಪಹಾರ ಗೃಹ ಸಂಘದ ಗೌರವಾಧ್ಯಕ್ಷ ನಾಗೇಂದ್ರ ಪ್ರಸಾದ್ ಸಲಹೆ ನೀಡಿದ್ದಾರೆ. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿದ್ದಾಪುರದ ರೆಸಾರ್ಟ್‌ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.