ಕುಶಾಲನಗರ ತಾಲೂಕು ಕಚೇರಿ ಎದುರು ಬಿಜೆಪಿ ಧರಣಿಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.