ಮಡಿಕೇರಿ: ರಸ್ತೆಗಳಲ್ಲಿನ ಗುಂಡಿ ಮುಚ್ಚಿದ ಯುವಕರುಮರಗೋಡು-ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು, ಮಳೆಗಾಲ ಜೋರಾಗಿರುವುದರಿಂದ ವಾಹನ ಸವಾರರು, ದಾರಿ ಹೋಕರು, ವಿದ್ಯಾರ್ಥಿಗಳು ಓಡಾಡುವುದೇ ಕಷ್ಟಕರವಾದ ಹಿನ್ನೆಲೆ ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ಸದಸ್ಯರು ಹಾಗೂ ಸ್ಥಳೀಯರು ಸೇರಿ ತಾವೇ ಹಣಕಾಸು ಹೊಂದಿಸಿ ಕಲ್ಲು, ಜಲ್ಲಿ, ಮಣ್ಣು ತಂದು ಶ್ರಮದಾನ ಮಾಡಿ ಗುಂಡಿಗಳನ್ನ ಮುಚ್ಚಿದ್ದಾರೆ.