ಕುಶಾಲನಗರ ಮಾಂಸ ಮಳಿಗೆ ಆವರಣ ಸ್ವಚ್ಛತೆ ಪಾಲನೆ ಕಡ್ಡಾಯಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಾಂಸ ಮಳಿಗೆಗಳ ಆವರಣದಲ್ಲಿ ಸ್ವಚ್ಛತೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಶಾಲನಗರ ಪುರಸಭೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಪಟ್ಟಣದ ಕುರಿ, ಆಡು, ಕೋಳಿ, ಮೀನು, ಮಾಂಸ ಮಳಿಗೆಗಳ ವ್ಯಾಪಾರಿಗಳ ಸಭೆಯಲ್ಲಿ ಈ ಬಗ್ಗೆ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.