ನಿರ್ಗತಿಕರ ಮುಖ್ಯ ವಾಹಿನಿಗೆ ತರಲು ಶ್ರಮಿಸಿದ ಅರಸು: ಐಶ್ವರ್ಯರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವ ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.