ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ಸ್ಥಗಿತ ಇಲ್ಲ: ಭೋಸರಾಜು ಸ್ಪಷ್ಟನೆರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.