ಸ್ತನ್ಯಪಾನದಿಂದ ಅಸ್ತಮಾ, ಆಹಾರ ಅಲರ್ಜಿ ಅಪಾಯ ಕಡಿಮೆ: ಡಾ.ನಂಜುಂಡಯ್ಯಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭ ಉದ್ಘಾಟಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಸ್ತನ್ಯಪಾನವು ಉಸಿರಾಟದ ತೊಂದರೆ ಕಡಿಮೆ ಮಾಡುತ್ತದೆ. ಅಸ್ತಮಾ, ಆಹಾರ ಅಲರ್ಜಿ, ಮಧುಮೇಹ ಮತ್ತು ಅನೀಮಿಯಾ ಆಗುವ ಅಪಾಯಗಳು ಕಡಿಮೆ ಎಂದರು.