ಕೊಡಗಿನಲ್ಲಿ ಮಳೆ ಆರ್ಭಟ: ವ್ಯಾಪಕ ಪ್ರವಾಹ, ಭೂಕುಸಿತಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮತ್ತೆ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಪಕ್ಕದ ಕೇರಳದ ವಯನಾಡಿನಲ್ಲಿ ಜಲಸ್ಫೋಟವಾಗಿ ಅಪಾರ ಸಾವು ನೋವು ಸಂಭವಿಸಿದ್ದು, ಕೊಡಗಿನಲ್ಲೂ ಭಾರಿ ಮಳೆಯಿಂದಾಗಿ ಜನರು ಆತಂಕಗೊಂಡಿದ್ದಾರೆ. ಇನ್ನೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತೆ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅರರ್ಟ್ ಘೋಷಣೆ ಮಾಡಲಾಗಿದೆ.