ಸೋಮವಾರಪೇಟೆ: ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮಸೋಮವಾರಪೇಟೆ ಜೈ ಜವಾನ್ ಮಾಜೀ ಸೈನಿಕರ ಸಂಘದ ಆಶ್ರಯದಲ್ಲಿ ಪಟ್ಟಣದ ಪತ್ರಿಕಾಭವನ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಘದ ಅಧ್ಯಕ್ಷ ಈರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇಶಾಭಿಮಾನಿಗಳು ಭಾಗಿಯಾಗಿದ್ದರು.