ಭಾರಿ ಮಳೆ: ಧರೆಗುರುಳಿದ ಮರಗಳು, ಸಂಚಾರಕ್ಕೆ ಅಡಚಣೆಸೋಮವಾರಪೇಟೆ ತಾಲೂಕಿನಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿದಭಾರೀ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ತೊಡಕಾಯಿತು. ಪಾದಚಾರಿಗಳು ಹಾಗೂ ವಾಹನ ಚಾಲಕರು ಪರದಾಡುವಂತಾಯಿತು. ಶಾಲೆಗಳಿಗೆ ದಿಢೀರ್ ರಜೆ ಘೋಷಿಸಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.