ಅ. 21ರಿಂದ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಅ. 21 ರಿಂದ ನ. 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ.