ಸುಂಟಿಕೊಪ್ಪ: 10 ಲಕ್ಷ ರು.ವೆಚ್ಚದ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆಸುಂಟಿಕೊಪ್ಪದಲ್ಲಿ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಬೇಕು ಎಂದರು.