ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಶೀಘ್ರ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.