ಕುಶಾಲನಗರ ಯೋಜನಾ ಪ್ರಾಧಿಕಾರ ನೂತನ ತಂಡ ಪದಗ್ರಹಣಕುಶಾಲನಗರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಪ್ರಮೋದ್ ಮುತ್ತಪ್ಪ, ಸದಸ್ಯರಾಗಿ ವಿ.ಎಸ್.ಸಜಿ, ಕೆ ಆರ್ ಸಂಗೀತ, ಕೆ.ಆರ್.ಕಿರಣ್ ಕುಮಾರ್ ಅಧಿಕಾರ ವಹಿಸಿಕೊಂಡರು. ಶಾಲನಗರದ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರಾಧಿಕಾರದ ಕಚೇರಿಯಲ್ಲಿ ಹೋಮ, ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕಾರ ಮಾಡಿದರು.