ಯುವನಿಧಿ: ಕೊಡಗು ಜಿಲ್ಲೆಯಲ್ಲಿ 1130 ಮಂದಿ ಹೆಸರು ನೋಂದಣಿಯುವನಿಧಿ ಯೋಜನೆಯು ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದ್ದು, ಜಿಲ್ಲೆಯಲ್ಲಿ ಈ ತನಕ 1130 ಮಂದಿ ಹೆಸರು ನೋಂದಣಿ ಮಾಡಿದ್ದಾರೆ. ಪ್ರತಿ ತಿಂಗಳು 3,000 ಮತ್ತು 1500 ರು. ನಿರುದ್ಯೋಗ ಭತ್ಯೆ ನೀಡುವ ಯೋಜನೆ ಆಗಿದೆ. ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ 562 ಮಂದಿಗೆ ಯುವನಿಧಿ ಯೋಜನೆ ತಲುಪುತ್ತಿದೆ.