ಪ್ರತಿಕೃತಿ ದಹನ ಪ್ರತಿಭಟನೆ ಭಾಗ: ವಿನೋದ್ ಪೂಜಾರಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಜನಸಾಮಾನ್ಯರಿಗೆ ಹೊರೆಯಾಗುವ ರೀತಿಯಲ್ಲಿ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ನೆಪ ಮಾಡಿಕೊಂಡು ಕೊಡಗಿನ ಕಾಂಗ್ರೆಸ್ಸಿಗರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.