ವಿ. ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ‘ಹೈ ಪ್ಲೈಯರ್ಸ್ ಕಪ್-2024’ ಉದ್ಘಾಟನೆವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಮನೆತನಗಳ ನಡುವಿನ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ‘ಹೈ ಪ್ಲೈಯರ್ಸ್ ಕಪ್-2024’ನ್ನು ಶುಕ್ರವಾರ ವಿಧ್ಯುಕ್ತವಾಗಿ ಆರಂಭವಾಯಿತು.