ಅಪರಾಧ ತಡೆಗಟ್ಟಲು ನಾಗರಿಕರ ಸಹಕಾರ ಅಗತ್ಯ: ಸುಂದರ್ ರಾಜ್ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಭೇಟಿ ನೀಡಿ ನಂತರ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಿದಲ್ಲಿ ಮಾತ್ರ ಪಟ್ಟಣ ಅಪರಾಧ ಮುಕ್ತವಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.