ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಮಡಿಕೇರಿ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್. ಎಸ್. ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ವಿನ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು