ಕೊಡಗು ಜಿಲ್ಲೆಯಲ್ಲಿ ಬೀಜ, ಗೊಬ್ಬರ ಅಗತ್ಯ ದಾಸ್ತಾನು: ಸೋಮಸುಂದರಕೊಡಗು ಜಿಲ್ಲೆಯಲ್ಲಿ ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈವರೆಗೆ 316.1 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.30 ರಷ್ಟು ಹೆಚ್ಚಾಗಿ ಮಳೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಅಂತ್ಯದಿಂದ ಪ್ರಾರಂಭವಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.