ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನ 20ನೇ ವಾರ್ಷಿಕೋತ್ಸವ ವಿಶೇಷ ಪೂಜೆಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 20ನೇ ವಾರ್ಷಿಕೋತ್ಸವ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನೂರಾರು ಭಕ್ತರ ಸಮುಖದಲ್ಲಿ ಸಂಪನ್ನಗೊಂಡಿತು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.