ಕರ್ನಾಟಕ ಸುವರ್ಣ ಸಂಭ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಸೆ. 24, 25ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ. ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.