ಮಳೆಗೆ ಮುನ್ನೆಚ್ಚರಿಕೆ: ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು, ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.