ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇಗುಲದಲ್ಲಿ ಮಳೆಗೆ ವಿಶೇಷ ಪೂಜೆಪುಷ್ಪಗಿರಿ ಬೆಟ್ಟ ತಪ್ಪಲಲ್ಲಿ ಇರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿರಾಜಪೇಟೆ ಆರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.