ಮೂಲಸೌಕರ್ಯ ವಂಚಿತ ಅಂಬಟಿ ಗ್ರಾಮ: ಮತದಾನ ಬಹಿಷ್ಕಾರ ಘೋಷಣೆಬಿಟ್ಟಂಗಾಲ ಗ್ರಾ.ಪಂ. ವ್ಯಾಪ್ತಿಯ ಅಂಬಟ್ಟಿ ಗ್ರಾಮಸ್ಥರು ಮತ ಬಹಿಷ್ಕಾರ ಕುರಿತ ಬ್ಯಾನರ್ ಗಳನ್ನು ಇದೀಗ ಮುಖ್ಯ ರಸ್ತೆಯಲ್ಲಿ ಅಳವಡಿಸಿದ್ದು, ‘ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ, ಚರಂಡಿ, ಶುದ್ಧ ಕುಡಿಯುವ ನೀರು, ದಾರಿದೀಪ ಮೊದಲಾದ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಗ್ರಾಮಕ್ಕೆ ಕಲ್ಪಿಸುವವರೆಗೂ ಯಾವುದೇ ಪಕ್ಷಗಳು ಮತ್ತು ಮುಖಂಡರು ಮತಯಾಚನೆಗಾಗಿ ನಮ್ಮ ಗ್ರಾಮವನ್ನು ಪ್ರವೇಶಿಸಬೇಡಿ’ ಎಂದು ಘೋಷಿಸಿದ್ದಾರೆ.