ಭಾರಿ ಮಳೆಗೆ ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಹಾನಿಸೋಮವಾರಪೇಟೆ ತಾಲೂಕಿನಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದ್ದು, ವಿವಿಧೆಡೆ ಸಾಕಷ್ಟು ಹಾನಿಯಾಗಿದೆ.ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗಿದ್ದು, ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದೆ. ಮಡಿಕೇರಿಯಿಂದ ಹಾಸನಕ್ಕೆ ತೆರಳುವ ಮಾರ್ಗದ ಗೌಡಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೆಗ್ಗುಳ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಬೃಹತ್ ಮರವೊಂದು ಬಿದ್ದು, ಒಂದು ಗಂಟೆ ಸಂಚಾರಕ್ಕೆ ಅಡಚಣೆಯಾಗಿತ್ತು.