ಏ.3ರಂದು ಯದುವೀರ್ ನಾಮಪತ್ರ ಸಲ್ಲಿಕೆ: ನಾಪಂಡ ರವಿ ಕಾಳಪ್ಪಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ.