ಮುಳ್ಳೂರು: ಶ್ರೀ ಮಾರಿಯಮ್ಮ ತಾಯಿ ಪ್ರತಿಷ್ಠಾಪನಾ ಮಹೋತ್ಸವ ಸಂಪನ್ನಪುನಃ ಪ್ರತಿಷ್ಠಾಪನಾ ಮಹೋತ್ಸವದ ಪ್ರಯುಕ್ತ ಬುಧವಾರ ಸಂಜೆ 6 ಗಂಟೆಗೆ ಗ್ರಾಮಸ್ಥರಿಂದ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ದೇವಸ್ಥಾನದಲ್ಲಿ ದೀಪ ಮಹಾಪೂಜೆ, ಗಣಪತಿ ಪೂಜೆ, ಕಳಸ ಸ್ಥಾಪನೆ, ಪಂಚಗವ್ಯಶುದ್ಧಿ, ಕಂಕಣಧಾರಣೆ, ವಾಸ್ತು ಹೋಮ, ವಾಸ್ತು ಬಲಿ, ಅಧಿವಾಸಗಳು ಮುಂತಾದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.