ಸೋಮವಾರಪೇಟೆ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಕೊನೆಗೂ ಚಾಲನೆಏಳು ವರ್ಷಗಳ ಹಿಂದೆ ರಾಜ್ಯದ ಹಲವು ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕ್ಯಾಂಟೀನ್ ಪ್ರಾರಂಭಿಸಲು ಯೋಜನೆ ರೂಪಿಸಿ, ಟೆಂಡರ್ ಕರೆಯಲಾಗಿತ್ತು. ಆದರೆ ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಕ್ಯಾಂಟೀನ್ ಪ್ರಾರಂಭವಾದರೂ, ತಾಲೂಕು ಕೇಂದ್ರ ಸೋಮವಾರಪೇಟೆಯಲ್ಲಿ ಮಾತ್ರ ಕಟ್ಟಡಕ್ಕೆ ಅಡಿಪಾಯ ಹಾಕಿ ಹೋಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದರು. ಈಗ ಮತ್ತೆ ಕಾಮಗಾರಿ ಚುರುಕುಪಡೆದಿದೆ.