25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲಾಧಿಕಾರಿ ಸಿದ್ಧತಾ ಸಭೆಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.25 ರಿಂದ ಏ.6 ರವರೆಗೆ ನಡೆಯಲಿದ್ದು, ಕೊಡಗು ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ 8, ಸೋಮವಾರಪೇಟೆ ತಾಲೂಕಿನ 11, ವಿರಾಜಪೇಟೆ ತಾಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುವಾರ ಸಿದ್ಧತಾ ಸಭೆ ನಡೆಸಿದರು.