ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಚುರುಕುಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಕೊಂಚ ಚುರುಕುಗೊಂಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಜೂನ್ ತಿಂಗಳಲ್ಲಿ ಕಳೆದ ಹಲವು ದಿನಗಳಿಂದ ವಾಡಿಕೆಯಷ್ಟು ಮಳೆಯಾಗಿಲ್ಲ. ಇದರಿಂದ ರೈತಾಪಿ ವರ್ಗ ಉತ್ತಮ ಮಳೆಗಾಗಿ ಎದುರು ನೋಡುತ್ತಿದ್ದರು. ಜಿಲ್ಲೆಯಲ್ಲಿ ಭತ್ತ ಹಾಗೂ ಮುಸುಕಿನ ಜೋಳ ಕೃಷಿ ಮಾಡಲು ಇದು ಸಕಾಲವಾಗಿದ್ದು, ಮಳೆಯ ಅನಿವಾರ್ಯತೆ ಎದುರಾಗಿದೆ.