ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸುಂದರ ವೇದಿಕೆ. ಅವರ ಉತ್ತಮ ಭವಿಷ್ಯವನ್ನು ರೂಪಿಸಲು ಇದು ವೇದಿಕೆಯಾಗಲಿ ಎಂದು ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಹೇಳಿದ್ದಾರೆ. ಚೆಂಬು ಊರುಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.