ಬಾಕಿ ವೇತನ ಪಾವತಿಸಿ: ಮಾಸ್ಕ್ ಧರಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆಮಂಗಳೂರು ವಿಶ್ವ ವಿದ್ಯಾನಿಲಯದಡಿ ಕೊಡಗಿನಲ್ಲಿ ಸುಮಾರು 45ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಬೇಸತ್ತ ಅತಿಥಿ ಉಪನ್ಯಾಸಕರು ಕಳೆದ ನಾಲ್ಕು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.