ಅಕ್ರಮ ಶಂಕೆ: ನೀಟ್ ಮರು ಪರೀಕ್ಷೆ ನಡೆಸಲು ಎನ್‌ಎಸ್‌ಯುಐ ಆಗ್ರಹ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ಉನ್ನತ ವ್ಯಾಸಂಗದ ಹಂಬಲ ಹೊಂದಿದ್ದ ಹಲವು ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ಆಗ್ರಹಿಸಿದ್ದಾರೆ.