ಮೀಸಲಾತಿ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಮಡಿಕೇರಿಯ ಹಳೆಯ ಖಾಸಗಿ ಬಸ್ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರು.