ಮಡಿಕೇರಿ: ಮೇಯಲ್ಲಿ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ಕೊಡವ ಯುವಕರಿಗೆ ಸೀಮಿತವಾಗಿರುವ ಪಂದ್ಯಾವಳಿ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಆಟಗಾರರಿಗೆ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ ರು.1.50 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ರು.75 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು.