ತಗ್ಗು ಪ್ರದೇಶಗಳಿಗೆ ಆಧುನಿಕ ತಂತ್ರಜ್ಞಾನದ ತಡೆಗೋಡೆ ಕಾಮಗಾರಿ: ಡಾ.ಮಂತರ್ ಗೌಡಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.