ಸುಂಟಿಕೊಪ್ಪ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತಸುಂಟಿಕೊಪ್ಪ ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದರು.