ಕೊಡಗು ಜಿಲ್ಲಾಡಳಿತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 125ನೇ ಜನ್ಮ ದಿನಾಚರಣೆಮಡಿಕೇರಿಯಲ್ಲಿ ಫೀ.ಮಾ. ಕಾರ್ಯಪ್ಪ ಅವರ 125ನೇ ಜನ್ಮದಿನಾಚರಣೆ ಭಾನುವಾರ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರೆ ಒಂದು ರೀತಿ ಸ್ಫೂರ್ತಿಯ ಚಿಲುಮೆ. ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಆಶಿಸಿದರು.