ರಸ್ತೆ ಅಭಿವೃದ್ಧಿಗೆ ಅರೆಕಾಡು, ಹೊಸ್ಕೇರಿ ಗ್ರಾಮಸ್ಥರ ಒತ್ತಾಯಮಡಿಕೇರಿ ತಾಲೂಕಿನ ಅರೆಕಾಡು, ಹೊಸ್ಕೇರಿ, ಅಭ್ಯತ್ಮಂಗಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದ್ವಿಚಕ್ರ ವಾಹನಗಳು ಹಾಗೂ ಪಾದಾಚಾರಿಗಳು ನಿಯಂತ್ರಣ ತಪ್ಪಿ ಬೀಳುತ್ತಿರುವ ಘಟನೆಗಳು ನಡೆದಿದೆ. ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.