ಸುಂಟಿಕೊಪ್ಪ ಹೋಬಳಿ: ಶಾಂತಿಯುತ ಬಿರುಸಿನ ಮತದಾನಸುಂಟಿಕೊಪ್ಪ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮತದಾನ ಶಾಂತಿಯುತವಾಗಿ ನಡೆಯಿತು.ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ಅನುಸಾರವಾಗಿ ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಅಂಗಡಿ, ಹೊಟೇಲ್, ವ್ಯಾಪಾರ, ವಾಹನ ನಿಲುಗಡೆ ಮತ್ತು ಗುಂಪು ಓಡಾಟ ನಿರ್ಬಂಧಿಸಲಾಗಿತ್ತು. ಇದರಿಂದ ಅಸಹಾಯಕರಿಗೆ ಓಡಾಟಕ್ಕೆ ಕಷ್ಟವಾಯಿತು ಎಂದು ಮತದಾರರು ದೂರಿದ್ದಾರೆ.