ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಪೊನ್ನಣ್ಣ ಅಭಯಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಪಾಲೆ ಜನಾಂಗ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ಗಮನಕ್ಕೆ ಬಂದಿದೆ. ಅಡಚಣೆ ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸುವ ಭರವಸೆ ನೀಡಿದರು.