• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಟರ್‌ ಸ್ಪೋರ್ಟ್ಸ್ ಚಟುವಟಿಕೆಗೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
ಹಾರಂಗಿ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ಕೂಗೆದ್ದಿದೆ. ಹಾರಂಗಿ ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ನಡೆಯುತ್ತಿದ್ದು ಇದರಿಂದ ಜಲಾಶಯದ ನೀರು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿರುವ ಹಾರಂಗಿ ಗ್ರಾಮಸ್ಥರು ತಕ್ಷಣ ಜಲಾಶಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ರದ್ದುಗೊಳಿಸಬೇಕು, ಇಲ್ಲದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ನಿರ್ಧಾರ ಎಚ್ಚರಿಸಿದ್ದಾರೆ.
ಕೊಡಗು ಮೈಸೂರು ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಪ್ರಣಾಳಿಕೆ ಬಿಡುಗಡೆ
ಮೈಸೂರು - ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು - ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಬುಧವಾರ ಮಡಿಕೇರಿ ಖಾಸಗಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಅನುಮತಿ ಪಡೆದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. 21ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕಣಿವೆ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಂಭ್ರಮ
ಕಣಿವೆಯ ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವವು ಭಕ್ತಿ ಸಂಭ್ರಮದಿಂದ ನಡೆಯಿತು. ದೇವಾಲಯದಲ್ಲಿ ಬೆಳಗ್ಗಿನಿಂದಲೇ ಪವಿತ್ರ ಗಂಗೋದಕದಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿನಿಯೋಗ, ನಂತರ ಹೆಬ್ಬಾಲೆ ಗ್ರಾಮಸ್ಥರು ಮೆರವಣಿಗೆಯ ಮೂಲಕ ತಂದ ಗಂಗಾಜಲ ಅಭಿಷೇಕ ನಡೆಯಿತು.
75 ವರ್ಷ ಕಳೆದರೂ ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲ: ಮಂಜಾಟ್‌ ಕಾಲನಿಯಲ್ಲಿ ಮತದಾನ ಬಹಿಷ್ಕಾರ ಎಚ್ಚರಿಕೆ
ಪ್ರತೀ ಬಾರಿ ಜನಪ್ರತಿನಿಧಿಗಳು ಭರವಸೆ ನೀಡಿ ತಮ್ಮ ಓಟಿನ ಬೇಟೆಗೆ ಬರುವ ಸ್ಥಳ ಎಂದರೆ ಮಡಿಕೇರಿ ತಾಲೂಕಿನ ಬಲ್ಲಮಾವಟಿ ಪಂಚಾಯಿತಿಗೆ ಒಳಪಟ್ಟ ಮಂಜಾಟ್ ಕಾಲೋನಿ. ಇಲ್ಲಿನ ಸುಮಾರು 23 ಮನೆಗಳ 60ಕ್ಕೂ ಅಧಿಕ ನಿವಾಸಿಗಳು ಸೌಕರ್ಯಗಳಿಲ್ಲದೇ ಬದುಕುತ್ತಿದ್ದಾರೆ. ಈ ಬಾರಿ ಇಲ್ಲಿ ಮತದಾನ ಬಹಿಷ್ಕಾರ ಕೂಗು ಎದ್ದಿದೆ.
ಭೂಗುತ್ತಿಗೆ ಕಂದಾಯ ಕಾಯ್ದೆ ತಿದ್ದುಪಡಿ ರದ್ದು ಆಗ್ರಹಿಸಿ ಪ್ರತಿಭಟನೆ
ಕೊಡಗು ಜಿಲ್ಲೆ ಭೂ ಗುತ್ತಿಗೆ ವಿರೋಧಿ ಐಕ್ಯ ಹೋರಾಟ ಸಮಿತಿ, ದಲಿತ, ಆದಿವಾಸಿ, ಕೃಷಿ, ಕಾರ್ಮಿಕ, ಮೂಲನಿವಾಸಿ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಶಿರಸ್ತೇದಾರ್ ಸುಶೀಲ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸರ್ಕಾರ ಜಾರಿಗೊಳಿಸಿರುವ ಭೂ ಗುತ್ತಿಗೆ ಕಂದಾಯ ಕಾಯ್ದೆ ತಿದ್ದುಪಡಿ ಕೂಡಲೆ ರದ್ದುಗೊಳಿಸುವಂತೆ ಆಗ್ರಹಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೊಡವ ಕೌಟುಂಬಿಕ ಹಾಕಿ: ಟೈ ಬ್ರೇಕರ್‌ನಲ್ಲಿ ಕುಲ್ಲಚಂಡ ತಂಡ 6-5ರ ಗೆಲವು
ಚೆರಿಯ ಪರಂಬು ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ಉತ್ಸವದಲ್ಲಿ ಮಂಗಳವಾರ ಕುಲ್ಲಚಂಡ ಮತ್ತು ಪುಟ್ಟಿಚಂಡ ತಂಡಗಳ ನಡುವೆ ಸಮಬಲದ ಹೋರಾಟ ನಡೆಯಿತು. ನಂತರ ನಡೆದ ಟೈ ಬ್ರೇಕರ್ ನಲ್ಲಿ ಕುಲ್ಲಚಂಡ 6-5 ರ ಮುನ್ನಡೆಯೊಂದಿಗೆ ಮುಂದಿನ ಸುತ್ತು ಪ್ರವೇಶಿಸಿತು.
ಏಪ್ರಿಲ್ 19ರಂದು ಮಡಿಕೇರಿಯಲ್ಲಿ ಯದುವೀರ್ ರೋಡ್ ಶೋ
19ರಂದು ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಮಡಿಕೇರಿಯ ಮಹದೇವಪೇಟೆಯಿಂದ ರೋಡ್ ಶೋ ಮಾಡಲಿದ್ದಾರೆ. ಅಲ್ಲದೆ ಬುಧವಾರ ಕೊಡಗಿನ ಎಲ್ಲಾ ದೇವಾಲಯಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಯದುವೀರ್ ಸಂಸದರಾಗಬೇಕು ಅವರು ಹಾಗೂ ಮೋದಿ ಅವರು ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಬಿಜೆಪಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು.
ಕುಶಾಲನಗರ: ಇಂದಿನಿಂದ 24ನೇ ವರ್ಷದ ಶ್ರೀ ರಾಮೋತ್ಸವ ವೈಭವ
24ನೇ ವರ್ಷದ ವೈಭವದ ಶ್ರೀ ರಾಮೋತ್ಸವ ಕಾರ್ಯಕ್ರಮ ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ ಮತ್ತು ಶ್ರೀ ರಾಮ ಸೇವಾ ಸಮಿತಿ ಆಶ್ರಯದಲ್ಲಿ ಬುಧವಾರದಿಂದ ನಡೆಯಲಿದೆ. ಕುಶಾಲನಗರ ರಥ ಬೀದಿಯ ಕ್ಷೇಮಾಭಿವೃದ್ಧಿ ಸಂಘದ ಆವರಣದಲ್ಲಿ ಏ.26ರ ತನಕ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
20ರಿಂದ ಶ್ರೀ ನಾಡುಕಡಪಾಲಪ್ಪ ದೇವಾಲಯ ಅಷ್ಟಬಂಧ ಬ್ರಹ್ಮಕಲಶೋತ್ಸವ
ಬೇಂಗೂರು ಗ್ರಾಮದ ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಉಡುಪಿ ಪೇಜಾವರ ಅದೋಕ್ಷಜ ಮಠದ ವಿಶ್ವ ಪ್ರಸನ್ನ ತೀರ್ಥರ ಸಮ್ಮುಖದಲ್ಲಿಏ.20ರಿಂದ 25ರ ವರೆಗೆ ನಡೆಯಲಿದೆ.
ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿಲ್ಲ: ಮಹಿಳಾ ಜೆಡಿಎಸ್ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ನೀಡಿರುವ ಹೇಳಿಕೆ ಖಂಡನೀಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ ಕರೆ ನೀಡಿರುವುದು ದುರಾದೃಷ್ಟಕರವೆಂದು ಕೊಡಗು ಜಿಲ್ಲಾ ಜೆಡಿಎಸ್ ಘಟಕ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved