ಬೃಹತ್ ಭೂ ಪರಿವರ್ತನೆಯಿಂದ ಕೊಡವರ ಅಸ್ತಿತ್ವಕ್ಕೆ ದಕ್ಕೆ : ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕಸಿಎನ್ಸಿ ವತಿಯಿಂದ ಚೆಟ್ಟಳ್ಳಿ ಪಟ್ಟಣದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ಲ್ಯಾಂಡ್ ಅನ್ನು ಬೃಹತ್ ಪ್ರಮಾಣದಲ್ಲಿ ಭೂ ಪರಿವರ್ತನೆ ಮಾಡುತ್ತಿದ್ದು ಇದು ಮುಂದೊಂದು ದಿನ ಮೂಲ ನಿವಾಸಿ ಆದಿಮ ಸಂಜಾತ ಕೊಡವರ ಅಸ್ತಿತ್ವಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ಹೇಳಿದರು.